ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಹುಬ್ಬಳ್ಳಿ- ಧಾರವಾಡ ವ್ಯಾಪ್ತಿಯ ಹವ್ಯಕ ವಿದ್ಯಾರ್ಥಿನಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ತೀರ್ಮಾನಿಸಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ದಾಖಲೆಯೊಂದಿಗೆ ಜುಲೈ 12ರೊಳಗೆ ಅಧ್ಯಕ್ಷರು, ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹುಬ್ಬಳ್ಳಿ ಧಾರವಾಡ, ಲೂತಿಮಠ ಲೇಔಟ್, ಗೋಕುಲ ರಸ್ತೆ ಹುಬ್ಬಳ್ಳಿ ಇಲ್ಲಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.