ಜಿಲ್ಲೆ

ಪ್ರತಿಯೊಬ್ಬರು ಸಸಿ ನೆಟ್ಟು ಪೋಷಿಸಲಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಅರಣ್ಯನಾಶದಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ಕಾನೂನು ಸೇವಾ ಪ್ರಾಧಿಕಾರ ಅರಣ್ಯ ಇ ಲಾಖೆ ಸಹಯೋಗದಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ 10 ಸಾವಿರ ಸಸಿ ನೆಡಲು ಯೋಜನೆ ರೂಪಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ,ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ,ಶಿಕ್ಷಣ ಇಲಾಖೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಗರಸಭೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಓನಕೆ ಓಬವ್ವ ವೃತ್ತದಲ್ಲಿ ಬುಧವಾರ ಏರ್ಪಡಿಸಿದ್ದ ಪರಿಸರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಚೆಗೆ ಹೊಸದಿಲ್ಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇದಕ್ಕೆ ಕಾರಣ ಪರಿಸರ ನಾಶ,ರೆಫ್ರಿಜಿರೇಟರ್ ಬಳಕೆಯಿಂದ ಹಾನಿಕಾರ ಸಿಎಫ್‌ಸಿ ಅನಿಲ ವಾತಾವರಣ ಸೇರುತ್ತಿದೆ. ಇದರಿಂದ ಮುಂದಿನ ಪೀಳಿ ಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪ್ರತಿ ಒಬ್ಬರಿಗೂ ಒಂದು ಗಿಡ ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲೆಯ ಎಲ್ಲ ಸಾರ್ವಜ ನಿಕರು ಸಸಿ ನೆಟ್ಟು ಬೆಳಸಬೇಕೆಂದ ಅವರು,ಮುಂದಿನ ವರ್ಷ ಬೇಸಿಗೆಯಲ್ಲಿ ಚಿತ್ರದುರ್ಗ ಜಿಲ್ಲೆ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್‌ನಿಂದ 35ಕ್ಕೆ ಇಳಿಯಲಿ ಎಂದು ಆಶಿಸಿದರು. ಜಿಲ್ಲಾದ್ಯಂತ ಮುಂದಿನ ಎರಡು ತಿಂಗಳು ಕಾಲ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ ಎಂದರು.
ಪರಿಸರ ಅಧಿಕಾರಿ ಇ.ಪ್ರಕಾಶ್ ಮಾತನಾಡಿ,ಭೂ ಮರುಸ್ಥಾಪನೆ,ಮರುಭೂಮಿಕರಣ ಹಾಗೂ ಬರ ತಡೆಯುವಿಕೆ ಘೋಷವಾಕ್ಯದೊಂದಿಗೆ ಈ ಬಾರಿ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,ನಗರಸಭೆ ಆಯುಕ್ತೆ ಎಂ.ರೇಣುಕಾ ಜಾಥಾಕ್ಕೆ ಚಾಲನೆ ನೀಡಿದರು. ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ ನಾಯಕ್,ಡಿಡಿಪಿಐ ಎಂ.ನಾಸಿರುದ್ದೀನ್,ಪ್ರಾಂಶುಪಾಲ ನಾಗರಾಜ್ ಮತ್ತಿತರರು ಇದ್ದರು.