ಔರಾದ್ ತಹಸಿಲ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ನೆರವು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲï ನ್ಯಾಯಾಧೀಶ ಹಾಜಿ ಹುಸೇನ್ ಸಾಬï ಯಾದವಾಡ ಉದ್ಘಾಟಿಸಿದರು. ಬಾಲಾಜಿ ಕಂಬಾರ, ರಾಹುಲ ರತ್ನಾಕರ, ಸಂಗಯ್ಯ ಸ್ವಾಮಿ, ಶಿವರಾಜ ಶೆಟಕಾರ, ರವಿಕಾಂತ ನೌಬಾದೆ ಇದ್ದರು. 
ಜಿಲ್ಲೆ

ಪ್ರತಿಯೊಬ್ಬರೂ ಕಾನೂನು ತಿಳಿದುಕೊಳ್ಳುವುದು ಅತ್ಯವಶ್ಯಕ

ಔರಾದ್: ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ ಹೇಳಿದರು.

ತಹಸಿಲ್ ಕಚೇರಿ ಸಂಭಾಗಣನಲ್ಲಿ ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ಕಾನೂನು ತಾಲೂಕ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಇಲ್ಲದೆ ಹಲವು ಬಾರಿ ಅನ್ಯಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು ಇರುತ್ತದೆ. ಸಾರ್ವಜನಿಕರು ಕಾನೂನು ವಿಷಯಗಳನ್ನು ಅರಿಯಲು ಅಧ್ಯಯನ ಮಾಡಬೇಕು. ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ ಮಾತನಾಡಿ, ಕಾರ್ಮಿಕ ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾಯ್ದೆಗಳಾದ ಕನಿಷ್ಠ ವೇತನ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಠ ಪದ್ಧತಿಗಳು ನಿರ್ಮೂಲನೆ, ಜೀತ ಪದ್ದತಿ ನಿರ್ಮೂಲನೆ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಕಾರ್ಮಿಕ ನಿರೀಕ್ಷಕ ರಾಹುಲ ರತ್ನಾಕರ ಮಾತನಾಡಿ, ಪ್ರತಿ ಅಂಗಡಿ ಮಾಲೀಕರು ಅಂಗಡಿ ಆರಂಭಿಸಿದ ೩೦ ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಬಾಲಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಒಂದು ವೇಳೆ ನೇಮಿಸಿಕೊಂಡಲ್ಲಿ ೨೦ ರಿಂದ ೫೦ ಸಾವಿರರವರೆಗೆ ದಂಡ ಮತ್ತು ೬ ತಿಂಗಳಿಗೆ ಕಡಿಮೆ ಇಲ್ಲದೆ ೨ ವರ್ಷದವರೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.

ಗ್ರೇಡ್- ೨ ತಹಸೀಲ್ದಾರ್ ಸಂಗಯ್ಯ ಸ್ವಾಮಿ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ ಶೆಟಕರ, ರವಿಕಾಂತ ನೌಬಾದೆ, ಬಾಲಾಜಿ ಉಪಾಸೆ, ನರೇಶ, ಸಂದೇಶ, ಶ್ರೀಧರ, ರಘುನಾಥ ಇದ್ದರು.