ಜಿಲ್ಲೆ

ಪ್ರತಿಷ್ಠಿತ ಶಾಲೆಗಳ ಪ್ರವೇಶಾವಕಾಶ

ಚಾಮರಾಜನಗರ: ಪ್ರತಿಷ್ಠಿತ ಶಾಲೆಗಳಲ್ಲಿ ಮೀಸಲಾತಿ ಕಲ್ಪಿಸಿ ಪ್ರವೇಶಾವಕಾಶ ನೀಡಲು 14 ಅಂಶಗಳ ಅತಿ ಹಿಂದುಳಿದ ಪರಿಶಿಷ್ಟ ಜಾತಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆ ಪ್ರಥಮ ಆದ್ಯತೆ ನೀಡಲಿದ್ದು ಸಂಬಂಧಪಟ್ಟ ಸಮುದಾಯದ ಮಕ್ಕಳು ದಾಖಲಾತಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

2025-26ನೇ ಸಾಲಿನಲ್ಲಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ 14 ಅಂಶಗಳ ಅತಿ ಹಿಂದುಳಿದ ಪರಿಶಿಷ್ಟ ಜಾತಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳು ಮೇ 21ರೊಳಗೆ ಸಂಬಂಧಪಟ್ಟ ದಾಖಲಾತಿಗಳನ್ನು ನಗರದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಪೌರಕಾರ್ಮಿಕರ ಮಕ್ಕಳು, ಸಫಾಯಿ ಕರ್ಮಚಾರಿಗಳ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು, ದೇವಾದಾಸಿಯರ ಮಕ್ಕಳು, ಅಂಗವಿಕಲತೆ ಹೊಂದಿರುವವರು, ಕೋವಿಡ್ 19 ಇನ್ನಿತರ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಯಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲಭಾದೆಯಿಂದ ಆತ್ಮಹತ್ಯೆಗೆ ಒಳಗಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಜೀತವಿಮುಕ್ತ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಆಯ್ಕೆ ಮಾಡಲು ಆದೇಶಿಸಲಾಗಿದೆ.