ಜಿಲ್ಲೆ

ಪ್ರತ್ಯೇಕ ಬೈಕ್ ಅಪಘಾತದಲ್ಲಿ ಇಬ್ಬರ ಸಾವು

ಮಳವಳ್ಳಿ: ತಾಲೂಕಿನ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಬೈಕ್‌ಗಳ ಅಪಘಾತದಿಂದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.


ಪಟ್ಟಣದ ಹೊರವಲಯದಲ್ಲಿರುವ ದಂಡಿನ ಮಾರಮ್ಮ ದೇವಸ್ಥಾನದ ಸಮೀಪ ಸ್ಕೂಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಬುಲೆಟ್ ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.


ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದ ಗುರುಸಿದ್ದನಾಯಕ(58) ಮೃತ. ಇವರು ರಸ್ತೆಯ ಬಲ ಬದಿಯಲ್ಲಿದ್ದ ಪೆಟ್ರೋಲ್ ಬಂಕ್‌ಗೆ ಹೋಗಲು ತಿರುವು ತೆಗದುಕೊಳ್ಳುವಾಗ ಹಿಂಬದಿಯಿಂದ ವೇಗವಾಗಿ ಬಂದ ಬುಲೆಟ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಗುರುಸಿದ್ದನಾಯ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.


ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಕಾಗೇಪುರ ಸಮೀಪ ಬೈಕ್ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದ ಪರಿಣಾಮ ಸವಾರ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿದ್ದಾನೆ.


ಬೆಂಗಳೂರು ಮೂಲದ ಪ್ರಶಾಂತ್ (27) ಮೃತಪಟ್ಟಿದ್ದು, ಹಿಂಬದಿ ಸವಾರ ಸುಬಾಸಿನ್ ಗಾಯಗೊಂಡಿದ್ದಾರೆ. ಇವರು ಶಿವನ ಸಮುದ್ರ ಬಳಿ ಇರುವ ಮಾರಮ್ಮನ ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ರಸ್ತೆ ಡುಬ್ಬ ಎಗರಿಸಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದಿ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡೂ ಪ್ರಕರಣ ದಾಖಲಾಗಿವೆ.