ಜಿಲ್ಲೆ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ

ಚಿತ್ರದುರ್ಗ:ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮನೀರಾವರಿ ಕಾರ‌್ಯಕ್ರಮವನ್ನು ತೋಟಗಾರಿಕೆ ಇಲಾಖೆಯಿಂದ ಅನುಷ್ಠನಗೊಳಿಸಲಾಗುತ್ತಿದೆ. ನೀರಾವರಿ ಸೌಲಭ್ಯದೊಂದಿಗೆ, ಅಡಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಜಿಲ್ಲೆಯ ರೈತರಿಗೆ ಸಹಾಯಧನ ಲಭ್ಯವಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.75, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90ರಂತೆ ಸಹಾಯಧನವಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಾಲೂಕು,ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸ ಬಹುದೆಂದು ತೋಟಗಾರಿಕೆ ಉಪ ನಿರ್ದೇಶಕಿ ಜಿ.ಸವಿತಾ ತಿಳಿಸಿದ್ದಾರೆ.