ಬಾದಾಮಿ ತಾಲೂಕಿನ ಚೀರ್ಲಕೊಪ್ಪ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಕೌಶಲ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾರ್ಗದರ್ಶನ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ ಜಿಲ್ಲಾಽಕಾರಿ ಜಾನಕಿ ಕೆ.ಎಂ ಉದ್ಘಾಟಿಸಿದರು.  
ಜಿಲ್ಲೆ

ಪ್ರಯತ್ನದಿಂದ ಕನಸು ನನಸು

ಸಂತೋಷ ದೇಶಪಾಂಡೆ

ಬಾಗಲಕೋಟೆ: ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಮತ್ತು ಪ್ರಯತ್ನದಿಂದ ಎಂತಹ ಕನಸುಗಳನ್ನು ನನಸು ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.

ಬಾದಾಮಿ ತಾಲೂಕಿನ ಚೀರ್ಲಕೊಪ್ಪ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಕೌಶಲ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾರ್ಗದರ್ಶನ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೌಶಲ್ಯ ಕಲಿಕೆಯಿಂದ ಸ್ವಾವಲಂಬನೆ, ಸಾಮಾಜಿಕ ಭದ್ರತೆ ಹಾಗೂ ಆತ್ಮ ವಿಶ್ವಾಸ ಮೂಡುತ್ತದೆ ಎಂದರು.

ಜೀವನದಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಮನೋಭಾವ ಹೊಂದಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲವನ್ನು ಹೊರತೆಗೆದು. ಅದರಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಇದರೊಂದಿಗೆ ಭವಿಷ್ಯದ ಯಶಸ್ಸಿಗೆ ಇಂದಿನಿAದ ತಯಾರಿ ನಡೆಸುವುದು ಅವಶ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾ ಕೌಶಲ ಅಭಿವೃದ್ಧಿ ಅಽಕಾರಿ ಜಿ.ಜಿ.ಹಿರೇಮಠ ಮಾತನಾಡಿ, ಪದವಿ ಪೂರ್ವ ಶಿಕ್ಷಣದ ನಂತರದಲ್ಲಿ ವಿದ್ಯಾರ್ಥಿಗಳು ಹಲವಾರು ವೃತ್ತಿಪರ ಕೋರ್ಸಗಳನ್ನು ಆಯ್ಕೆ ಮಾಡಿಕೊಳ್ಳುವದರೊಂದಿಗೆ ಜ್ಞಾನದಿಂದ ಮಾತ್ರವಲ್ಲದೇ ಕೌಶಲವನ್ನು ರೂಪಿಸಿಕೊಳ್ಳುವದರಿಂದ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕಾ ಮತ್ತು ವೃತ್ತಿಜೀವನದಲ್ಲಿ ಆಲಿಸುವಿಕೆ ಮತ್ತು ಸಂವಹನ ಕೌಶಲ್ಯವು ಆತ್ಮವಶ್ಯಕವಾಗಿದ್ದು, ಇದರೊಂದಿಗೆ ತಮ್ಮ ಭವಿಷ್ಯದಲ್ಲಿ ತಾವು ಏನಾಗಬೇಕೆಂಬುದರ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು.

ಯೋಜನೆಗೆ ತಕ್ಕಂತೆ ತಯಾರಿಯನ್ನು ನಡೆಸಬೇಕು. ಇದಕ್ಕೆ ಪೂರಕವಾಗಿ ಅಭ್ಯಾಸ ಮಾಡಿ ಜೊತೆಗೆ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಎಸ್.ಎಸ್.ಆಸಾರಿ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಡಿ.ಮಠಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.