ಮದ್ದೂರು ಪಟ್ಟಣದ ಪ್ರವಾಸಿ ಮಂದಿರ ಬಳಿ ಕೆಲಕಾಲ ಟ್ರಾಫಿಲ್ ಜಾಮ್ ಉಂಟಾಗಿತ್ತು.  
ಜಿಲ್ಲೆ

ಪ್ರಯಾಣಿಕರಿಗೆ ಬದಲಿ ಮಾರ್ಗ

ಮದ್ದೂರು: ಮಂಡ್ಯ ತಾಲೂಕಿನ ಬೂದನೂರು ಕೆರೆ ಏರಿ ಒಡೆದಿರುವ ಪರಿಣಾಮ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದು, ಪ್ರಯಾಣಿಕರಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಮೈಸೂರು ಕಡೆಗೆ ಹೋಗುವ ರಸ್ತೆಗೆ ಸಂಚಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ಕೆ.ಎಂ.ದೊಡ್ಡಿ (ಭಾರತೀನಗರ) ಮಂಡ್ಯ ಮೈಸೂರು ಅಥವಾ ಕೆ.ಎಂ.ದೊಡ್ಡಿ, ಮಳವಳ್ಳಿ, ಬನ್ನೂರು ಮಾರ್ಗವಾಗಿ ಮೈಸೂರಿಗೆ ವಾಹನಗಳು ತೆರಳುವಂತೆ ಸೂಚಿಸಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿ ಬಲಕ್ಕೆ ತಿರುಗಿ ಕೆ.ಎಂ.ದೊಡ್ಡಿ, ಹಲಗೂರು, ಕನಕಪುರ, ಬೆಂಗಳೂರು ಅಥವಾ ಕೆ.ಎಂ.ದೊಡ್ಡಿ, ಮದ್ದೂರು, ರಾಮನಗರದ ಮೂಲಕ ಬೆಂಗಳೂರಿಗೆ ತೆರಳಬೇಕಿದೆ.

ಬದಲಿ ಮಾರ್ಗದ ವ್ಯವಸ್ಥೆ ಮಾಡಿರುವುದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಹರ ಸಹಾಸ ಪಡುವಂತಾಗಿತ್ತು.