ಜಿಲ್ಲೆ

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮನವಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಪ್ರವಾಸಿತಾಣಗಳ ಅಭಿವೃದ್ಧಿಗೆ 20 ಕೋಟಿ ರೂ.ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಮಂಗಳವಾರ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಐತಿಹಾಸಿಕ ತಾಣವಾಗಿದ್ದು, ಚಿತ್ರದುರ್ಗದ ಕಲ್ಲಿನಕೋಟೆ, ಜೋಗಿಮಟ್ಟಿ ಗಿರಿಧಾಮ, ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯ ಮತ್ತು ಚಂದ್ರವಳ್ಳಿ ಗುಹೆಗಳಂತಹ ಪ್ರಮುಖ ಪ್ರವಾಸಿ ತಾಣಗಳನ್ನು ಹೊಂದಿವೆ.
ಪ್ರವಾಸಿ ತಾಣಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸುವ ಮೂಲಕ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಬೇಕಾಗಿದೆ. ಆದ್ದರಿಂದ ಅನುದಾನ ಬಿಡುಗಡೆ ಮಾಡುವಂತೆ ಹೊಸದಿಲ್ಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಒತ್ತಾಯಿಸಿದರು.