ಜಿಲ್ಲೆ

ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನ

ಹಾಸನ: ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮ ದಿನಾಚರಣೆ ಏ.5ರಂದು ಹಾಗೂ ಏ.14 ರಂದು ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯವಾಗಿ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2025-26ನೇ ಸಾಲಿನಲ್ಲಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ, ಗೌರವಿಸಲು ಜಿಲ್ಲಾಧಿಕಾರಿಗಳು ಉದ್ದೇಶಿಸಿದ್ದಾರೆ. ಆದ್ದರಿಂದ ಸದರಿ ಜನಾಂಗದ ಶ್ರೇಯಸ್ಸಿಗಾಗಿ ಶ್ರಮಿಸಿದ ಮತ್ತು ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ಅರ್ಹರಿಂದ ಅಗತ್ಯ ದಾಖಲಾತಿ, ಮಾಹಿತಿಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಸಮುದಾಯದವರು ಮಾ.28 ರೊಳಗಾಗಿ ಮುದ್ದಾಂ ಮೂಲಕ ತಮ್ಮ ಪ್ರಸ್ತಾವನೆಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಸಲ್ಲಿಸತಕ್ಕದ್ದು. ನಂತರ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.