ಚಿತ್ರದುರ್ಗ: ಇಂದಿನ ಒತ್ತಡದ ಜೀವನಶೈಲಿಯ ಸೂಕ್ತ ನಿರ್ವಹಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಯುಷ್ ಚಿಕಿತ್ಸಾ ಪದ್ಧತಿಗಳು ಹಿಂದೆಂದಿಗಿಂ ತಲೂ ಈಗ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದು ಕೊಂಡಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್‌ವಾಸುದೇವ ಹೇಳಿದರು.
ಜಿಲ್ಲಾ ಆಯುಷ್ ಇಲಾಖೆ,ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ಬುಧವಾರ ನ ಗರದ ಜಿಲ್ಲಾ ವಕೀಲರ ಭವನದಲ್ಲಿ ಆಯೋಜಿಸಿದ್ದ ಆಯುಷ್ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವ ರು,ನ್ಯಾಯಾಧೀಶರು,ನ್ಯಾಯಾಂಗ ಇಲಾಖೆ ಅಧಿಕಾರಿ,ಸಿಬ್ಬಂದಿ ಹಾಗೂ ವಕೀಲರು ಈ ಶಿಬಿರದ ಪೂರ್ಣ ಪ್ರಯೋಜನ ಪಡೆದು ಕೊ ಳ್ಳಬೇಕೆಂದರು.
ಆಯುಷ್ ವೈದ್ಯಾಧಿಕಾರಿ ಟಿ.ಶಿವಕುಮಾರ್ ಮಾತನಾಡಿ,ಈ ಶಿಬಿರ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಆ ರೋಗ್ಯ ತಪಾಸಣೆ ಮಾಡಿ ಎಲ್ಲ ಕಾಯಿಲೆಗಳಿಗೂ ಔಷಧವನ್ನು ಆಯುಷ್ ತಜ್ಞರು ಕೊಡುತ್ತಾರೆ. ಒಂದು ತಿಂಗಳ ನಂತರ ಇದರ ಮುಂ ದುವರಿದ ಭಾಗವಾಗಿ ಮತ್ತೊಂದು ಶಿಬಿರವನ್ನು ಪ್ರತ್ಯೇಕವಾಗಿ ಆಯೋಜಿಸಲಾಗುವುದು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್‌ನಾಗಸಮುದ್ರ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ,ಕಾರ‌್ಯದರ್ಶಿ ಗಂಗಾಧ ರ್,ನ್ಯಾಯಾಧೀಶರು,ನ್ಯಾಯಾಂಗ ಇಲಾಖೆ ಅಧಿಕಾರಿ,ಸಿಬ್ಬಂದಿ,ವಕೀಲರು ಇದ್ದರು. ಮಹಾಲಕ್ಷ್ಮೀ ಪ್ರಾರ್ಥಿಸಿದರು. ಡಾ.ನಾಗರಾಜ್ ನಾಯಕ್ ವಂದಿಸಿದರು.