ಜಿಲ್ಲೆ

ಪ್ರೇಮಾ ಪಾಟೀಲ, ಗೀತಾ ಚಿದ್ರಿ ಪ್ರಚಾರ

ಬೀದರ್: ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಾಜಶೇಖರ ಪಾಟೀಲ ಪರ ಅವರ ಪತ್ನಿ ಪ್ರೇಮಾ ಪಾಟೀಲ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ಪಂಡಿತರಾವ್ ಚಿದ್ರಿ ಅವರು ಹುಮನಾಬಾದ್ ತಾಲ್ಲೂಕಿನ ಕುಮಾರಚಿಂಚೋಳಿಯಲ್ಲಿ ಪ್ರಚಾರ ನಡೆಸಿದರು.
ಪಾದಯಾತ್ರೆ ಮೂಲಕ ಮನೆ ಮನೆಗೆ ಭೇಟಿ ನೀಡಿ, ಕ್ಷೇತ್ರವನ್ನು ಮಾದರಿಯನ್ನಾಗಿಸಲು ರಾಜಶೇಖರ ಪಾಟೀಲ ಅವರನ್ನು ಆಶೀರ್ವದಿಸಬೇಕು ಎಂದು ಮನದಾರರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.