ಜಿಲ್ಲೆ

ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Kodagu

ನಿವಾರಸಂತೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಕುಶಾಲನಗರ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿನಿ ಕೆ.ಆರ್.ಮೋನಿಕಾ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಮತ್ತೊಬ್ಬಳು ವಿದ್ಯಾರ್ಥಿನಿ ಸ್ಫೂರ್ತಿ ತೃತೀಯ ಸ್ಥಾನ ಗಳಿಸಿದ್ದಾಳೆ. 1500 ಮೀ. ಓಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಮಾನಸ ದ್ವಿತೀಯ ಸ್ಥಾನ ಗಳಿಸಿದ್ದಾಳೆ. 3000 ಮತ್ತು 1500 ಮೀ. ಓಟದಲ್ಲಿ ವಿದ್ಯಾರ್ಥಿನಿ ಇಂಚರ ತೃತೀಯ ಸ್ಥಾನಗಳಿಸಿದ್ದಾಳೆ. ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಫಾತಿಮಾ ದ್ವಿತೀಯ ಸ್ಥಾನಗಳಿಸಿದ್ದಾಳೆ.

ಬಾಲಕರ ವಿಭಾಗದಲ್ಲಿ 3000 ಮೀ. ಓಟದಲ್ಲಿ ಬಸವರಾಜ್ ದ್ವಿತೀಯ ಹಾಗೂ 1500 ಮೀ. ಓಟದಲ್ಲಿ ತೃತೀಯ, ಉದ್ದ ಜಿಗಿತ ಸ್ಪರ್ಧೆಯಲ್ಲಿ ಮಹಮ್ಮದ್ ಸಮಾಲ್ ದ್ವಿತೀಯ ಸ್ಥಾನಗಳಿಸಿದ್ದಾನೆ. 800 ಮೀ. ಓಟದಲ್ಲಿ ರೋಹಿತ್ ತೃತೀಯ ಸ್ಥಾನ ಹಾಗೂ ಟ್ರಿಪಲ್ ಜಂಪ್ ಸ್ಪರ್ಧೆ ಆದಿತ್ಯ ತೃತೀಯ ಸ್ಥಾ ಗಳಿಸಿದ್ದಾನೆ. ಈ ಎಲ್ಲ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.