ಬಾಗಲಕೋಟೆ: ಪ್ರತಿ ವರ್ಷದಂತೆ, ಈ ವರ್ಷವು ಜೂನ್ ೫ ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ಘೊಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ಈ ವರ್ಷದ ಉದ್ದೇಶವಾಗಿದೆ ಎಂದು ಜಿ.ಪಂ ಸಿಇಒ ಶಶಿಧರ ಕುರೇರ ತಿಳಿಸಿದ್ದಾರೆ.
ಮೇ ೨೨ ರಿಂದಲೇ ಇದರ ಅಭಿಯಾನ ಆರಂಭಿಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬAಧ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಚುನಾಯಿತ ಪ್ರತಿನಿಽಗಳು, ಯುವಕರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ಸ್ವಯಂ ಸೇವಕರು ಮತ್ತು ಗ್ರಾಮದ ಮುಖಂಡರು ಅಭಿಯಾನದಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಘನ ತ್ಯಾಜ್ಯ ನಿರ್ವಹಣೆಯ ಪ್ರಮುಖ ಭಾಗವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತು ಥರ್ಮಾಕೋಲ್ದಿಂದ ಮಾಡಿದ ಎಲ್ಲ ರೀತಿಯ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೆಗೆದು ಹಾಕುವುದು.
ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿನ ಮಟ್ಟದಲ್ಲಿ ಕಡಿಮೆಗೊಳಿಸುವುದು. ಸಾವಯವ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ ವೈಜ್ಞಾನಿಕವಾಗಿ ಸಂಸ್ಕರಿಸುವುದು. ಮನೆಗಳು, ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳು ಮತ್ತು ಜಲ ಮೂಲಗಳನ್ನು ಸ್ವಚ್ಛವಾಗಿಡುವ ಮೂಲಕ ಒಂದು ಪರಿಸರ ಸ್ನೇಹಿ ವಾತಾವರಣ ಸೃಷ್ಠಿಸುವುದು ಮುಖ್ಯ ಉದ್ದೇಶವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಖeಜuಛಿe, ಖeಛಿಥಿಛಿಟe, ಖeu*e ಮತ್ತು ಖeಜಿu*e ವಿಧಾನಗಳನ್ನು ಅಳವಡಿಸಿಕೊಂಡು ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಪ್ರತಿ ಗ್ರಾಮ ಪಂಚಾಯಿತಿ ಕ್ರಮವಹಿಸಬೇಕು ಎಂದು ಜಿ.ಪಂ ಸಿಇಒ ತಿಳಿಸಿದ್ದಾರೆ.
ಏಕ ಬಳಕೆಯ ಪ್ಲಾಸ್ಟಿಕ್ ತ್ಯೆಜಿಸುವುದು ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಪ್ಲಾಸ್ಟಿಕ್ ಕವರಗಳನ್ನು ಗ್ರಾಹಕರಿಗೆ ನೀಡುವ ಅಂಗಡಿ, ಬೇಕರಿ, ಇತರೆ ವಾಣಿಜ್ಯ ಕೇಂದ್ರಗಳ ತಪಾಸಣೆ, ಜಲ ಮೂಲಗಳ ಸ್ವಚ್ಚಗೊಳಿಸುವುದು ಮತ್ತು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಶೌಚಗೃಹಗಳನ್ನು ಬಳಕೆ ಮಾಡಲು ಅರಿವು ಮೂಡಿಸುವುದು. ಗ್ರಾಮಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗದAತೆ ಕ್ರಮ ಕೈಗೊಳ್ಳುವುದು ಹಾಗೂ ಚರಂಡಿಗಳಲ್ಲಿ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ಎಸೆಯದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಸಿಇಒ ಶಶಿಧರ ಕುರೇರ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.