ರಾಯಚೂರು: ಸ್ವಾತಂತ್ರೋತ್ಸವ ದಿನದಂದು ಪ್ಲಾಸ್ಟಿಕ್ ಧ್ವಜಗಳ ಮಾರಾಟ ನಿಷೇಸಬೇಕು. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹಿಂದು ಜನ ಜಾಗೃತಿ ಸಮಿತಿ ಒತ್ತಾಯಿಸಿದೆ.
ಸಮಿತಿ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಶುಕ್ರವಾರ ಮನವಿ ಸಲ್ಲಿಸಿ, ಪ್ಲಾಸ್ಟಿಕ್ ಧ್ವಜಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಅಪಮಾನ ಮಾಡಲಾಗುತ್ತಿದ್ದು, ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಸಬೇಕು ಎಂದು ಆಗ್ರಹಿಸಿದರು.
ಮಕ್ಕಳು ಪ್ಲಾಸ್ಟಿಕ್ ಧ್ವಜಗಳನ್ನು ರಸ್ತೆ, ಚರಂಡಿಯಲ್ಲಿ ಬಿಸಾಡುತ್ತಿದ್ದಾರೆ. ನ್ಯಾಯಾಲಯವೂ ಕೂಡಾ ರಾಷ್ಟ್ರಧ್ವಜಕ್ಕೆ ಆಗುತ್ತಿರುವ ಅಪಮಾನವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ತಯಾರಿಕೆಯನ್ನು ನಿಷೇಸಿದ್ದು, ಆದೇಶವನ್ನು ಜಿಲ್ಲಾಡಳಿತ ಪಾಲಿಸಬೇಕು ಎಂದು ಒತ್ತಾಯಿಸಿದರು.
ನಿಯೋಗದಲ್ಲಿ ಸಮಿತಿ ಪದಾಕಾರಿಗಳಾದ ಸುವರ್ಣ, ಕೃಷ್ಣವೇಣಿ, ಕೆ.ಶೋಭಾ, ಶರಣಬಸವ ಇದ್ದರು.