ಚಿತ್ರದುರ್ಗ: ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಸಂಪನ್ಮೂಲ ಸಾಹಿತ್ಯ, ಪ್ರಶ್ನೆಕೋಠಿ ಸಹಕಾರಿಯಾಗುತ್ತವೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್‌ನಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಸಿದ್ಧತೆ ಕುರಿತು ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು ನಮ್ಮ ಜಿಲ್ಲೆಯಲ್ಲಿ ವಿಷಯವಾರು ಅನುಭವಿ ಸಂಪನ್ಮೂಲ ವ್ಯಕ್ತಿಗಳ ತಂಡ ರಚಿಸಿಕೊಂಡು ವಿಷಯವಾರು ಪ್ರಶ್ನೆಕೋಠಿ, ಸಾಹಿತ್ಯ ಸಿದ್ಧಪಡಿಸಬೇಕು. 2024-25ನೇ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ಧಿಗೆ ಸಂಬಂಧಿಸಿದ ತರಬೇತಿಗಳು ಅನುಷ್ಠಾನಗೊಂಡಿರುವ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಶೋಧನಾ ಅಧ್ಯಯನ ಕೈಗೊಂಡು ವರದಿಯನ್ನು ಡಿಎಸ್‌ಇಆರ್‌ಟಿ ಕಚೇರಿಗೆ ಸಲ್ಲಿಸಬೇಕು ಎಂದರು.
ಉಪ ಪ್ರಾಚಾರ‌್ಯ ಅಶ್ವಥ್‌ನಾರಾಯಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಚ್.ಗಿರಿಜಾ, ಪೂರ್ಣಿಮಾ, ತಿಪ್ಪೇಸ್ವಾಮಿ, ಜ್ಞಾನೇಶ್ವರಿ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಯು.ಸಿದ್ದೇಶಿ, ವಿ.ಕನಕಮ್ಮ, ನಿತ್ಯಾನಂದ, ಸಿ.ಎಸ್.ಲೀಲಾವತಿ, ಶಿವಲೀಲಾ, ಅರ್ಜುಮಂದ್‌ಭಾನು, ಪದ್ಮಾ, ರಂಗಸ್ವಾಮಿ, ತಾಂತ್ರಿಕ ಸಹಾಯಕ ಅವಿನಾಶ್ ಮತ್ತಿತರರಿದ್ದರು.
----------------