ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೂಳೂರಿನ ಫಲ್ಗುಣಿ ನದಿಗೆ ಲಾರಿಯಲ್ಲಿ ತ್ಯಾಜ್ಯ ತಂದು ಸುರಿಯುತ್ತಿರುವುದನ್ನು ರೆಡ್‌ಹ್ಯಾಂಡ್ ಆಗಿ ಹಿಡಿದ ಪಾಲಿಕೆ ಅಧಿಕಾರಿಗಳು, ಲಾರಿಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.
ನದಿಗಳಿಗೆ ತ್ಯಾಜ್ಯಗಳನ್ನು ಸುರಿಯಬಾರದು ಎಂದು ಕಟ್ಟು ನಿಟ್ಟಿನ ಆದೇಶ ನೀಡಲಾಗಿದ್ದರೂ, ಅದನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ತ್ಯಾಜ್ಯ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ತಂದು ಸುರಿಯಲಾಗುತಿತ್ತು.
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಚಾಲಕನಿಗೆ ಕ್ಲಾಸ್ ತೆಗೆದುಕೊಂಡು, ಮಾಲೀಕರಿಗೆ ದಂಡ ಹಾಕಿದ್ದಾರೆ. ನಗರದ ಪಿವಿಎಸ್ ಬಳಿಯಿಂದ ತ್ಯಾಜ್ಯ ತಂದಿರುವುದಾಗಿ ಚಾಲಕ ಒಪ್ಪಿಕೊಂಡಿದ್ದಾನೆ.