ಬಾಗಲಕೋಟೆ ನಗರದ ಎಸ್.ಎನ್.ಮೆಡಿಕಲ್ ಕಾಲೇಜಿನ ಅತ್ರೇಯ ಸಭಾಂಗಣದಲ್ಲಿ ಸೋಮವಾರ ನಡೆದ ಹಮ್ಮಿಕೊಂಡಿದ್ದ ಬಿವಿವಿ ಸಂಘದ ಫಿಜಿಯೋಥೆರಪಿ ಕಾಲೇಜಿನ ಪದವಿ ಪ್ರದಾನ ಸಮಾರಂಭ. 
ಜಿಲ್ಲೆ

ಫಿಜಿಯೋಥೆರಪಿ ವೈದ್ಯರ ಬೇಡಿಕೆ ಹೆಚ್ಚಾಗಿದೆ

ಬಾಗಲಕೋಟೆ: ಬದಲಾದ ಜೀವನ ಶೈಲಿಯಿಂದಾಗಿ ಅನೇಕ ಪ್ರಕಾರದ ದೈಹಿಕ ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಫಿಜಿಯೋಥೆರಪಿ ತಜ್ಞರ ಪಾತ್ರ ಅನನ್ಯವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಇವರ ಬೇಡಿಕೆ ಹೆಚ್ಚಾಗಿದೆ ಎಂದು ಭಾರತ ಸರ್ಕಾರದ ಫಿಜಿಯೋಥೆರಪಿ ವೃತ್ತಿ ನಿರತರ ಸಮಿತಿಯ ಸದಸ್ಯ ಡಾ.ವಿಜಯ ಕಾಗೆ ಹೇಳಿದರು.

ನಗರದ ಎಸ್.ಎನ್.ಮೆಡಿಕಲ್ ಕಾಲೇಜಿನ ಅತ್ರೇಯ ಸಭಾಂಗಣದಲ್ಲಿ ಸೋಮವಾರ ನಡೆದ ಹಮ್ಮಿಕೊಂಡಿದ್ದ ಬಿವಿವಿ ಸಂಘದ ಫಿಜಿಯೋಥೆರಪಿ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಫಿಜಿಯೋಥೆರಪಿ ಚಿಕಿತ್ಸೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿದ್ದು, ಫಿಜಿಯೋಥೆರಪಿ ತಜ್ಞರನ್ನು ವೈದ್ಯರೆಂದು ಪರಿಗಣಿಸಲಾಗಿದೆ. ಬಾಗಲಕೋಟೆಯಂತಹ ಸಣ್ಣ ನಗರದಲ್ಲಿ ವಿವಿಧ ಪ್ರಕಾರದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಡಾ.ವೀರಣ್ಣ ಚರಂತಿಮಠ ಅವರ ಪ್ರಯತ್ನ ಅಭಿನಂದನಾರ್ಹ ಎಂದು ಶ್ಲಾöಸಿದರು.

ಬಿವಿವಿ ಸಂಘದ ಫಿಜಿಯೋಥೆರಪಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ಒದಗಿಸಲಾಗಿದೆ. ಪದವಿಧರರಾಗುತ್ತಿರುವ ನೀವು ಪಾಲಕರ, ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಯ ಕೊಡುಗೆ ಹಾಗೂ ತ್ಯಾಗವನ್ನು ಮರೆಯದಿರಿ ಎಂದು ನೂತನ ಪದವಿಧರರಿಗೆ ಹೇಳಿದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ, ಈ ಭಾಗದ ವಿದ್ಯಾರ್ಥಿಗಳಿಗೆ ಫಿಜಿಯೋಥೆರಪಿ ಶಿಕ್ಷಣ ಪಡೆಯಲು ಅವಕಾಶ ನೀಡಿರುವುದು ಬಿವಿವಿ ಸಂಘದ ಉದ್ದೇಶ. ಡಾ.ವೀರಣ್ಣ ಚರಂತಿಮಠ ಅವರ ಪ್ರಯತ್ನ -Àಲದಿಂದ ೨೦೧೯ ರಲ್ಲಿ ಫಿಜಿಯೋಥೆರಪಿ ಕಾಲೇಜು ಸ್ಥಾಪನೆಯಾಯಿತು. ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪನೆಯಾದ ಪ್ರಥಮ ಮತ್ತು ಏಕೈಕ ಫಿಜಿಯೋಥೆರಪಿ ಕಾಲೇಜು ಎನ್ನುವ ಹೆಮ್ಮೆ ನಮ್ಮದು ಎಂದ ಅವರು, ಪದವಿ ಪಡೆದು ಭವಿಷ್ಯದ ವೃತ್ತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಯುವ ಫಿಜಿಯೋಥೆರಪಿ ತಜ್ಞರು ರೋಗಿಗಳ ಆರೈಕೆ ಕಾಳಜಿ ಮತ್ತು ಬದ್ಧತೆಯಿಂದ ಮಾಡಿ. ಸೇವೆಯ ಮೂಲಕ ವೃತ್ತಿಗೆ ಘನತೆ ತಂದುಕೊಡಿ ಎಂದು ಹೇಳಿದರು.

೪೦ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿಯೊಂದಿಗೆ ಆರಂಭವಾದ ಫಿಜಿಯೋಥೆರಪಿ ಕಾಲೇಜಿನಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದಿಂದ ದಾಖಲಾತಿ ೬೦ ಕ್ಕೆ ಹೆಚ್ಚಿಸಿ ವಿಶ್ವವಿದ್ಯಾಲಯದಿಂದ ಅನುಮತಿ ದೊರೆತು ವಿದ್ಯಾರ್ಥಿಗಳು ಪ್ರವೇಶ ಪಡೆದಿರುವರು. ಆರು ವಿಷಯಗಳಲ್ಲಿ ಎ..ಪಿ.ಟಿ ಕೋರ್ಸ್ ಪ್ರಾರಂಭಗೊAಡಿದೆ. ಎಂ.ಪಿ.ಟಿ ಕೋರ್ಸಿಗೆ ೧೮ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ದೊರೆತಿದೆ. ಈಗಾಗಲೇ ಫಿಜಿಯೋಥೆರಪಿ ಕಾಲೇಜು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊAಡು ಕಾರ್ಯನಿರ್ವಹಿಸುತ್ತಿದೆ. ೧೦ ಕೋಟಿ ರೂ. ವೆಚ್ಚದಲ್ಲಿ ೫೦ ಸಾವಿರ ಚದರಡಿಗಳ ವಿಸ್ತೀರ್ಣದಲ್ಲಿ ಕಾಲೇಜು ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಹೊಸ ಕಟ್ಟಡದಲ್ಲಿ ಅತ್ಯಾಧುನಿಕ ಬೋಧನಾ ಕೊಠಡಿಗಳು, ಪ್ರಯೋಗಾಲಯಗಳು, ಗ್ರಂಥಾಲಯ, ಸಿಬ್ಬಂದಿ ಕೊಠಡಿಗಳು, ಸಭಾಂಗಣ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಎಸ್.ಎನ್.ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ ಮತ್ತು ಡಾ.ಸುಚಿತ್ರಾ ದಿವಾನಮಲ್ ಉಪಸ್ಥಿತರಿದ್ದರು. ಡಾ.ಶ್ರೇಯಾ ಸೌಕಾರ ಪರಿಚಯಿಸಿದರು. ಡಾ.ಮಹಾಂತೇಶ ಬಿರಡಿ ವಂದಿಸಿದರು. ಡಾ.ನೇಹಾ ರಾಮದುರ್ಗ ಪ್ರಾಸ್ತವಿಕವಾಗಿ ಮಾತನಾಡಿದರು. ನೇಹಾ ಅತ್ತರ ಮತ್ತು ಈಶ್ವರಿ ಕಲಬುರಗಿ ನಿರೂಪಿಸಿದರು.