ಗುಂಡ್ಲುಪೇಟೆ: ಪುರಸಭೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಶುಕ್ರವಾರ ಪಟ್ಟಣದ ಕಿತ್ತೂರುರಾಣಿ ಚೆನ್ನಮ್ಮ ರಸ್ತೆಯಲ್ಲಿರುವ ಒತ್ತುವರಿಗಳನ್ನು ತೆರವುಗೊಳಿಸಿದರು.
ಕಳೆದ ಎರಡು ತಿಂಗಳ ಹಿಂದೆ ಪುರಸಭೆ ಅಧಿಕಾರಿಗಳು ರಸ್ತೆ ಹಾಗೂ ಫುಟ್‌ಪಾತ್‌ಗಳಲ್ಲಿ ಮಾಡಿಕೊಂಡಿದ್ದ ಒತ್ತುವರಿದಾರರಿಗೆ ಒತ್ತುವರಿ ತೆರವುಗೊಳಿಸುವಂತೆ ನೋಟಿಸ್ ನೀಡಿದ್ದರು. ಆದರೂ ರಸ್ತೆ ಅತಿಕ್ರಮಿಸಿ ವ್ಯಾಪಾರ ಮಾಡುತ್ತಿದ್ದ ಹಣ್ಣು ಮತ್ತು ಹೂವಿನ ಅಂಗಡಿಗಳ ತೆರವಿಗೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ, ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ, ಸಬ್ ಇನ್‌ಸ್ಪೆಕ್ಟರ್‌ಗಳಾದ ಸಾಹೇಬಗೌಡ ಮತ್ತು ಆರ್.ಚಂದ್ರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದರು. ಮತ್ತೊಮ್ಮೆ ಅತಿಕ್ರಮಣ ನಡೆಸಿದರೆ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.