ಜಿಲ್ಲೆ

ಫೆ.28ರಂದು ನಗರದಲ್ಲಿ ಉದ್ಯೋಗ ಮೇಳ

ಚಾಮರಾಜನಗರ: ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್, ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಫೆ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ತರಬೇತಿಗೆ ಆಯ್ಕೆಮಾಡಿಕೊಂಡು ಉದ್ಯೋಗ ಒದಗಿಸಲಾಗುವುದು. 18 ರಿಂದ 35 ವರ್ಷದೊಳಗಿರುವ ನಿರುದ್ಯೋಗ ಯುವಕ, ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.