ಜಿಲ್ಲೆ

ಫೆ. 28ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ

ಚಾಮರಾಜನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಸರ್ಕಾರಿ ಮಹಿಳಾ ಕಾಲೇಜು ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಜನಪದ ಮಹಾಭಾರತ ಶೋಷಣೆಯ ನೆಲೆಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ೆ.28ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೈಲೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಆರ್.ಎಸ್. ಸುರೇಶ್ ಕವನ ವಾಚನ ಮಾಡುವರು. ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಪ್ರೊ. ಮೈಸೂರು ಕೃಷ್ಣಮೂರ್ತಿ ವಿಷಯ ಮಂಡಿಸುವರು. ಸರ್ಕಾರಿ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ರುಕ್ಮಿಣಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.