ಬಾಗಲಕೋಟೆ: ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಮುಧೋಳ ರನ್ನ ವೈಭವ-೨೦೨೫ ಫೆ.೨೨, ೨೩ ಹಾಗೂ ೨೪ ರಂದು ಒಟ್ಟು ಮೂರು ದಿನಗಳ ಕಾಲ ಹಮ್ಮಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿ ಸಭಾಂಗಣದಲ್ಲಿ ರನ್ನ ವೈಭವ ಆಚರಣೆ ಕುರಿತು ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರನ್ನ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ರನ್ನ ವೈಭವ-೨೦೨೫ನ್ನು ವಿಜೃಂಭಣೆಯಿAದ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ರೂಪುರೇಷೆ ತಯಾರಿಸಲು ವಿವಿಧ ರೀತಿಯ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಪ್ರತಿಯೊಂದು ಸಮಿತಿಯವರು ಅಚ್ಚಕಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದರು.
ರನ್ನ ವೈಭವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕ್ರೀಡೆಗಳನ್ನು ಸಹ ಆಯೋಜನೆ ಮಾಡಲಾಗುತ್ತಿದೆ. ಅಽಕಾರಿಗಳು ತಮಗೆ ಯಾವುದರ ಮೇಲೆ ಆಸಕ್ತಿ ಇರುವುದು ಅಂತಹ ಸಮಿತಿಗಳಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಸನ್ನದ್ಧರಾಗಬೇಕು. ಆಚರಣೆ ಸಂಬAಽಸಿದAತೆ ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರಗೋಷ್ಠಿ ಸೇರಿದಂತೆ ಇತರೆ ವಿಷಯಗಳ ಕುರಿತು ಸಾರ್ವಜನಿಕರು, ಕಲಾ ಆಸಕ್ತರು, ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಽಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನAದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಽಕಾರಿಗಳು ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು