ಜಿಲ್ಲೆ

ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ಆ.20ರಂದು

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನೀಯರಿಂಗ್ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ

ರಾಜ್ಯಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ,‌ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಗಳ ಸಲಹೆಗಾರರು (ನೀತಿ ಮತ್ತು ಕಾರ್ಯಕ್ರಮ) ಮತ್ತು ಆಳಂದ ಶಾಸಕ ಬಿ.ಆರ್.ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಮತ್ತು ಅಫಜಲಪೂರ ಶಾಸಕ‌ ಎಂ.ವೈ.ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಶಾಸಕರು, ನಿಗಮ-ಮಂಡಳಿ ಅಧ್ಯಕ್ಷರು ಭಾಗವಹಿಸುವರು.