ಜಿಲ್ಲೆ

ಬಡ ಕುಟುಂಬಗಳಿಂದ ಅರ್ಜಿ ಆಹ್ವಾನ

ಎ.ಎಸ್.ಮಣಿಕಂಠ

ಚಾಮರಾಜನಗರ: ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಬಡ ಕುಟುಂಬಗಳಿಂದ ಪುರಸಭಾ ನಿಧಿ ಅನುದಾನದಲ್ಲಿ ಸವಲತ್ತು ಸಹಾಯಧನ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿಯ ಜತೆ 2 ಭಾವಚಿತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಸೌಲಭ್ಯ ಪಡೆಯದಿರುವ ಬಗ್ಗೆ ಅಫಿಡವಿಟ್, ಓದುತ್ತಿರುವ ಬಗ್ಗೆ ಕಾಲೇಜಿನಿಂದ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಕಾಲೇಜಿನಿಂದ ಸಹಾಯಧನ ಪಡೆದಿಲ್ಲದಿರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ಪುರಸಭೆ ಕಚೇರಿಯಿಂದ ಆ.14ರವರೆಗೆ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆ.19ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು. ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಹಾಗೂ ಈಗಾಗಲೇ ಸವಲತ್ತು ಪಡೆದಿರುವವರು ಪುನಃ ಅರ್ಜಿ ಸಲ್ಲಿಸುವಂತ್ತಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.