ಜಿಲ್ಲೆ

ಬಡ ಮಕ್ಕಳ ಶಿಕ್ಷಣದಿಂದ ವಂಚಿತರಾಗ ಬಾರದು

ಚಿತ್ರದುರ್ಗ:ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೊಳಗೇರಿ ನಿವಾಸಿಗಳ ಮಕ್ಕಳಿಗೆ ನೆರವಾಗಬೇಕಿದೆ ಎಂದು ವಕೀಲ ಬಿ.ಕೆ.ರಹಮತ್‌ವುಲ್ಲಾ ಹೇಳಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಪತ್ರಕರ್ತರ ಭ ವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬಡ ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ ವಿತರಣೆ ಕಾರ‌್ಯಕ್ರಮದಲ್ಲಿ ಮಾತನಾಡಿದ ಅವರು,ಬಡಮ ಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಹೊಣೆ ಸಮಾಜದ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ವಕೀಲೆ ದಿಲ್‌ಶಾದ್ ಉನ್ನಿಸಾ ಮಾತನಾಡಿ ಕೊಳಗೇರಿಯ ಪ್ರತಿ ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಏನಾದರೂ ತೊಂ ದರೆ ಆದರೆ ಮಕ್ಕಳು 1098 ಸಹಾಯವಾಣಿಗೆ ಕರೆ ಮಾಡಿ ರಕ್ಷಣೆ ಪಡೆಯ ಬೇಕೆಂದರು. ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಮಾತ ನಾಡಿದರು. ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಿದ್ದರು,ಮೈಲಾರಪ್ಪ,ಸಬೀನಾಜಾನ್,ಶಿವಲಿಂಗಮ್ಮ,ಲೀಲಾವತಿ,ಪ ತ್ರಕರ್ತ ನರೇನಹಳ್ಳಿ ಅರುಣ್‌ಕುಮಾರ್ ವೇದಿಕೆ ಯಲ್ಲಿದ್ದರು.