ಜಿಲ್ಲೆ

ಬರೋಬ್ಬರಿ 19 ಲಕ್ಷ ರೂ. ಆನ್‌ಲೈನ್ ವಂಚನೆ

ಹಾಸನ: ಅಪರಿಚಿತ ವ್ಯಕ್ತಿ ಅಂಜನಾ ಕಪೂರ್ ಎಂಬ ಹೆಸರನ್ನು ಹೇಳಿಕೊಂಡು ಸಂತ್ರಸ್ತರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ನಿಮಗೆ ದುಪ್ಪಟ್ಟು ಹಣ ಕೊಡುವುದಾಗಿ ನಂಬಿಸಿ ಬರೋಬ್ಬರಿ 19,85,380 ರೂ. ವಂಚಿಸಿದ್ದಾನೆ.
ಕಳೆದ ಫೆ.20ರಂದು ಸಂತ್ರಸ್ತ ವ್ಯಕ್ತಿಗ ಕರೆ ಮಾಡಿದ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ನಿಮಗೆ ದುಪ್ಪಟ್ಟು ಹಣ ಕೊಡುವುದಾಗಿ ನಂಬಿಸಿದ್ದಾರೆ. ಅಪರಿಚಿತ ವ್ಯಕ್ತಿಯ ಮಾತು ನಂಬಿ ಸಂತ್ರಸ್ತ ವ್ಯಕ್ತಿ ಮಾ.30ರಿಂದ ಮೇ 04ರವರೆಗೆ ಒಟ್ಟು 14 ಬಾರಿ ಒಟ್ಟು 19,85,380 ಹಣವನ್ನು ಅಪರಿಚಿತ ವ್ಯಕ್ತಿ ತಿಳಿಸಿದ ವಿವಿಧ ಖಾತೆಗಳಿಗೆ ಹಾಕಿದ್ದಾರೆ. ನಂತರ ಅಪರಿಚಿತ ವ್ಯಕ್ತಿ ಯಾವುದೇ ಹಣವನ್ನು ವಾಪಸ್ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬಂದು ನಂತರ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡಾಗ ತಾವು ಮೋಸ ಹೋಗಿರುವುದು ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಮೇ 16ರಂದು ನಗರದ ಸಿಇಎನ್ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.