ಜಿಲ್ಲೆ

ಬಲಗೈ ಸಮುದಾಯದ ವಿಚಾರಸಂಕಿರಣ

ಚಾಮರಾಜನಗರ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸ್ಥಿತಿ-ಗತಿಗಳನ್ನು ಸಮುದಾಯದ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಸೆ.30 ರಂದು ಪರಿಶಿಷ್ಟ ಜಾತಿ ಬಲಗೈ ಸಂಬಂಧಿತ ಜಾತಿಗಳ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಸಂಚಾಲಕ ಅಯ್ಯನಪುರ ಶಿವಕುಮಾರ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯಲ್ಲಿ ಬೆಳಗ್ಗೆ 11.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮೈಸೂರಿನ ಉರಿಲಿಂಗಪೆದ್ದಿ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯವಹಿಸುವರು. ಸಂಸದ ಸುನೀಲ್ ಬೋಸ್, ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕ ಎನ್.ಮಹೇಶ್, ಎಸ್.ಬಾಲರಾಜು, ಜಿ.ಎನ್.ನಂಜುಂಡಸ್ವಾಮಿ, ಮಾಜಿ ಸಂಸದ ಎ.ಸಿದ್ದರಾಜು, ಎಂ.ಶಿವಣ್ಣ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ರಾಜು ಅವರು ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ವಿಚಾರ ಸಂಕಿರಣದಲ್ಲಿ ಸಮುದಾಯದ ಯಜಮಾನರು ಹಾಗೂ ಇನ್ನಿತರೆ ಜನಪ್ರತಿನಿಧಿಗಳು ಹಾಗೂ ನೌಕರರು ಹಾಜರಾಗಲಿದ್ದು,ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಆರ್.ಮಹದೇವ್, ನಲ್ಲೂರು ಸೋಮೇಶ್, ರಂಗಸ್ವಾಮಿ, ಆರ್.ಪಿ.ನಂಜುಂಡಸ್ವಾಮಿ, ಮಹದೇವಸ್ವಾಮಿ, ಸೋಮಣ್ಣ, ಗೋವಿಂದರಾಜು ಹಾಜರಿದ್ದರು.