ಹುಮನಾಬಾದ್: ಹಳ್ಳಿಖೇಡ(ಬಿ)ದ ಬಸವತೀರ್ಥ ವಿದ್ಯಾಪೀಠ ಪ್ರೌಢ ಶಾಲೆ ಬಾಲಕಿಯರ ತಂಡ ದಸರಾ ಕಲಬುರಗಿ ವಿಭಾಗ ಮಟ್ಟದ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಯಿತು.
ಕಲಬುರಗಿಯಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಬಳ್ಳಾರಿ ತಂಡವನ್ನು ಸೋಲಿಸಿ ವಿಜಯಿಯಾಯಿತು. ವಿದ್ಯಾರ್ಥಿಗಳ ಸಾಧನೆ ಹಾಗೂ ತಂಡದ ವ್ಯವಸ್ಥಾಪಕ ಮಂಗಲಾ ಎಸ್.ಪಾಟೀಲ್, ತರಬೇತುದಾರ ಈರಣ್ಣ ಜೋತಗೊಂಡ ಅವರ ಶ್ರಮಕ್ಕೆ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಕೇಶವರಾವ ತಳಘಟಕರ್, ಆಡಳಿತ ಮಂಡಳಿ ಅಧ್ಯಕ್ಷ ಸೋಮಯ್ಯ ಹಿರೇಮಠ, ಆಡಳಿತಾಧಿಕಾರಿ ಗುಂಡಯ್ಯ ತೀರ್ಥ, ವಿದ್ಯಾವತಿ ತೀರ್ಥಾ, ಚಂದ್ರಕಾಂತ ಬಿರಾದಾರ, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.