ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸವೇಶ್ವರ ಸಹಕಾರಿ ಬ್ಯಾಂಕಿಗೆ ನೀಡಿದ ೨೦೨೨ ಸಾಲಿನ ಅತುತ್ತಮ ಸಹಕಾರಿ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಸ್ವೀಕರಿಸಿದರು. ಉಪಾಧ್ಯಕ್ಷ ಮೋಹಣ ಜಿ. ವಾಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಸಿ. ಕೇಮಾಳಿ, ನಿರ್ದೇಶಕರಾದ ಎಸ್.ಎಸ್.ಜಿಗಳೂರ, ಎಸ್. ಸಿ ಆರಬ್ಬಿ ಇತರರು ಇದ್ದರು. 
ಜಿಲ್ಲೆ

ಬಸವೇಶ್ವರ ಸಹಕಾರಿ ಬ್ಯಾಂಕಿಗೆ ಅತ್ಯುತ್ತಮ ಸಹಕಾರಿ ಬ್ಯಾಂಕ ಪ್ರಶಸ್ತಿ

ಬಾಗಲಕೋಟೆ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಅವರು ಬಸವೇಶ್ವರ ಸಹಕಾರಿ ಬ್ಯಾಂಕಿಗೆ ೨೦೨೨ ಸಾಲಿನ ಅತುತ್ತಮ ಸಹಕಾರಿ ಬ್ಯಾಂಕ್ ಎಂದು ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ.
ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಉಪಾಧ್ಯಕ್ಷ ಮೋಹಣ ಜಿ. ವಾಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಸಿ. ಕೇಮಾಳಿ, ನಿರ್ದೇಶಕರಾದ ಎಸ್.ಎಸ್.ಜಿಗಳೂರ, ಎಸ್. ಸಿ ಆರಬ್ಬಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಬ್ಯಾಂಕಿಗೆ ನಿರ್ದೇಶಕ ಮಂಡಳಿಯ ಸದಸ್ಯರು, ಎಲ್ಲ ಸಿಬ್ಬಂದಿ ವರ್ಗದವರು ಪ್ರಕಾಶ ತಪಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.