ಮೈಸೂರು: ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ದಾಸಪ್ಪ ವೃತ್ತದ ಸಮೀಪ ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮೈಸೂರಿನಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದಾಸಪ್ಪ ವೃತ್ತದ ಬಳಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರು ಬಸ್‌ನಿಂದ ಇಳಿದರು.
ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದಾಗ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಪೈಪ್‌ನಿಂದ ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.