ಅರಸೀಕೆರೆ ಗ್ರಾಮಾಂತರ : ತಾಲೂಕಿನ ಬಾಣಾವರ ಹೋಬಳಿಯ ರಾಷ್ಟ್ರೀಯ ಹೆದ್ದಾರಿ-234 ಶಾನೆಗೆರೆ ಸಮೀಪ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಗೂಡ್ಸ್ ವಾಹನ ಪರಸ್ಪರ ಡಿಕ್ಕಿ ಹೋಡದು ಭೀಕರ ಅಪಘಾತ ಸಂಭವಿಸಿದ್ದು, ಎರಡು ವಾಹನಗಳು ಸಂಪೂರ್ಣ ನುಚ್ಚುಗುಜ್ಜಾಗಿದೆ.
ಬಾಣವರದಿಂದ ಹೊಸದುರ್ಗಕ್ಕೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ಗೆ ಸಿಂಗಟಗೆರೆ ಮಾರ್ಗವಾಗಿ ಬಾಣವರದ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಷ್ಟ್ರೀಯ ಹೆದ್ದಾರಿ 234 ರ ಪ್ರದೇಶದಲ್ಲಿ ನಿತ್ಯ ಒಂದಲ್ಲ ಒಂದು ಅವಘಡ ನಡೆಯುತ್ತಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಸೂಚನಾ ಫಲಕ ಸೇರಿ ಯಾವುದೇ ಮುಂಜಾಗೃತ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಸಂಬಂಧಪಟ್ಟವರು ಎಚ್ಚರ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.