ಚಿಕ್ಕಮಗಳೂರು: ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ ವಿಭಾಗದ ಬೇಲೂರು ಮತ್ತು ಸಕಲೇಶಪುರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡುವ ಜೊತಗೆ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಡಿಎಸ್‌ಎಸ್ ಜಿಲ್ಲಾ ಪದಾಧಿಕಾರಿಗಳು ಸಾರಿಗೆ ಇಲಾಖೆ ನಿಯಂತ್ರಣಾಧಿಕಾರಿ ಜಗದೀಶ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಮಹಿಳಾ ಸಂಚಾಲಕಿ ಕೆ.ಬಿ.ಗೀತಾ, ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್, ತಾಲೂಕು ಸಂಘಟನಾ ಸಂಚಾಲಕ ಡಿ.ಎಸ್.ಉಮೇಶ್ ಇದ್ದರು.