ಜಿಲ್ಲೆ

ರಾಯಬಾಗ ಬಸ್ ನಿಲ್ದಾಣದಲ್ಲಿ ನಿರೀಕ್ಷಕ ಆತ್ಮಹತ್ಯೆ!

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಾನಂದ ಭಜಂತ್ರಿ(48)ಆತ್ಮಹತ್ಯೆ ಶರಣಾಗಿದ್ದಾರೆ. ನಿತ್ಯದ ಸೇವೆ ಪೂರ್ಣಗೊಳಿಸಿದ ಬಳಿಕ ಬಸ್ ನಿಲ್ದಾಣದಲ್ಲಿ ಮೊದಲ ಮಹಡಿಯಲ್ಲಿರುವ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಿನ ಜಾವ ಕರ್ತವ್ಯಕ್ಕೆ ಬರುವ ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ರಾಯಬಾಗ ಪೊಲೀಸರು ತಿಳಿಸಿದ್ದಾರೆ. ಈತ ಮೂಲತಃ ಗೋಕಾಕ ತಾಲೂಕಿನ ಸುಣಧೋಳಿ ಗ್ರಾಮದವನಾಗಿದ್ದು. ಚಿಕ್ಕೋಡಿಯಲ್ಲಿ ಕುಟುಂಬದ ಸಮೇತ ವಾಸಿಸುತ್ತಿದ್ದ. ರಾಯಬಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ನಿತ್ಯವೂ ಕರ್ತವ್ಯ ಮುಗಿಸಿ ಸಂಜೆ ಚಿಕ್ಕೋಡಿಗೆ ತೆರಳುತ್ತಿದ್ದ. ಆತ್ಮಹತ್ಯೆಗೆ ಕಾರಣ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ರಾಯಬಾಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.