ಬಾಗಲಕೋಟೆ: ಬೀಳಗಿ ತಾಲೂಕಿನ ತೋಳಮಟ್ಟಿ ಗ್ರಾಮದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಬೀಳಗಿ ತಾಲೂಕಿನ ವಿವಿಧೆಡೆ ಭೇಟಿ ನೀಡಿದ ಸಂದರ್ಭದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಬೀಳಗಿ ಕ್ರಾಸ್‌ನಲ್ಲಿರುವ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಮಯದಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಲು ಸೂಚಿಸಿದರು. ಮನ್ನಿಕೇರಿ ಗ್ರಾಮದ ನರೇಗಾ ಯೋಜನೆಯಡಿ ಕೈಗೊಂಡ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕೂಲಿಕಾರ್ಮಿರನ್ನು ಮಾತನಾಡಿಸಿ ಸರಿಯಾದ ಸಮಯಕ್ಕೆ ಕೂಲಿ ಜಮೆಗೆ ಕ್ರಮವಹಿಸಲು ತಿಳಿಸಿದರು.
ಮನ್ನಿಕೇರಿ ಗ್ರಾಮದ ಡಿಬಿಒಟಿ-೨ ಕಾಮಗಾರಿ ವೀಕ್ಷಣೆ ಮಾಡಿಲಾಯಿತು. ಸುನಗ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ೨ ಕೊಠಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ ನಿಗಽತ ಅವಽಯಲ್ಲಿ ಗುಣಮಟ್ಟ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.
ಭೇಟಿ ಸಮಯದಲ್ಲಿ ಬೀಳಗಿ ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ ಶ್ರೀನಿವಾಸ ಪಾಟೀಲ, ಬೀಳಗಿ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿಕಿರಣ ಡಂಬಳ ಸೇರಿದಂತೆ ಇತರರು ಉಪಸ್ಥಿತರಿದ್ದರು.