ಲಿಂಗನಮಕ್ಕಿ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಜಲಾಶಯದ ಕ್ರಸ್ಟ್‌ಗೇಟ್ ತೆರೆದು, ಶರಾವತಿ ನದಿ ನೀರಿಗೆ ಪುಷ್ಪವೃಷ್ಟಿ ಸಲ್ಲಿಸಲಾಯಿತು. ಮಧು ಬಂಗಾರಪ್ಪ, ಗೋಪಾಲಕೃಷ್ಣ ಬೇಳೂರು, ಬಲ್ಕಿಷ್ ಬಾನು, ಆರ್.ಪ್ರಸನ್ನಕುಮಾರ್ ಇತರರಿದ್ದರು. 
ಜಿಲ್ಲೆ

ಬಾಗಿನದಿಂದ ಅಕಾರಕ್ಕೆ ಕುತ್ತು ಅರ್ಥಹೀನ

ಕಾರ್ಗಲ್; ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಸುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆ-ಬೆಳೆ ಸಮೃದ್ಧವಾಗಿ ಆಗಿದೆ ಎಂಬುದಕ್ಕೆ ಸಾಕ್ಷಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಲಿಂಗನಮಕ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ಕ್ರಸ್ಟ್‌ಗೇಟ್ ತೆರೆದು, ಶರಾವತಿ ನೀರಿಗೆ ಪುಷ್ಪವೃಷ್ಟಿಗೈದು ಮಾತನಾಡಿದ ಅವರು, ಲಿಂಗನಮಕ್ಕಿ ಜಲಾಶಯಕ್ಕೆ ಬಾಗಿನ ಕೊಟ್ಟರೆ ಅಕಾರ ಕಳೆದುಕೊಳ್ಳುತ್ತಾರೆ ಎನ್ನುವುದು ಅರ್ಥವಿಲ್ಲದ ಮಾತು. ಎಲ್ಲರೂ ಒಂದಲ್ಲಾ ಒಂದು ದಿನ ಅಕಾರ ಕಳೆದುಕೊಳ್ಳುತ್ತಾರೆ ಎಂದರು.

ಈ ಸ್ಥಳಕ್ಕೆ ಬಂದಾಗ ನಮ್ಮ ಪೂರ್ವಿಕರು ಇಂಥದ್ದೊಂದು ಅಣೆಕಟ್ಟು ಕಟ್ಟಿದ್ದಾರಲ್ಲ ಅನ್ನುವುದು ಹೆಮ್ಮೆ ಅನಿಸುತ್ತದೆ. ಲಿಂಗನಮಕ್ಕಿ ಜಲಾಶಯದ ಮೇಲೆ ಎಲ್ಲರೂ ನಿಂತು ಸಂಭ್ರಮಿಸುವುದು ಶಾಶ್ವತವಾಗಿರಬೇಕು. ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ ಸಂದರ್ಭ ಹೆಚ್ಚು ಪರಿಸರ ನಾಶವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ಯಶಸ್ವಿಗೊಳಿಸಲಾಗುವುದು ಎಂದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ಕೊಡುವ ಕೆಲಸ ಶೀಘ್ರವೇ ಆಗುತ್ತದೆ. ಶಿವಮೊಗ್ಗದಲ್ಲಿ ನಡೆದ ಸಭೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಟ್ಟೇ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ನಮ್ಮ ಸರ್ಕಾರ ಬಂದು ಎರಡು ವರ್ಷ ಮೂರು ತಿಂಗಳಾಗಿದೆ. ಮುಳುಗಡೆ ಸಂತ್ರಸ್ತರ ಸರ್ವೇ ಕಾರ್ಯ ನಡೆಯುತ್ತಿದೆ. ಪ್ರತಿ ಪ್ರಕರಣಕ್ಕೂ ಸುಪ್ರೀಂ ಕೋರ್ಟ್‌ಗೆ ವರದಿ ನೀಡಬೇಕು. ಡ್ರೋನ್ ಮೂಲಕ ಸರ್ವೇ ಕಾರ್ಯ ನಡೆದಿದೆ. ಈ ಭಾಗದ ಜನರಿಗೆ ಸಿಗಂದೂರು ದೇವಿಯ ಆಶೀರ್ವಾದದಿಂದ ಶರಾವತಿ, ಚಕ್ರಾ, ವರಾಹಿ ಸಂತ್ರಸ್ತರಿಗೆ ಹಕ್ಕುಪತ್ರ ಕೊಡುವ ಕೆಲಸ ಸಿದ್ದರಾಮಯ್ಯ ನೇತತ್ವದ ಸರ್ಕಾರ ಮಾಡುತ್ತದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ರವಿಕುಮಾರ್, ಕಲಗೋಡು ರತ್ನಾಕರ, ರಾಜು, ಕಲಸೆ ಚಂದ್ರಪ್ಪ, ಉಪ ವಿಭಾಗಾಕಾರಿ ವೀರೇಶಕುಮಾರ್, ಎಎಸ್‌ಪಿ ಡಾ. ಬೆನಕಪ್ರಸಾದ್, ಕರ್ನಾಟಕ ವಿದ್ಯುತ್ ನಿಗಮದ ಅಕಾರಿಗಳು ಹಾಜರಿದ್ದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಮಳೆ-ಬೆಳೆ ಆಗುವುದಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಕಳೆದ ವರ್ಷಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿತ್ತು. ಈ ವರ್ಷವೂ ಭರ್ತಿಯಾಗಿದೆ. ಲಿಂಗನಮಕ್ಕಿ ಡ್ಯಾಂ ನಿರ್ಮಾಣವಾದ ನಂತರ 21ನೇ ಬಾರಿ ಕ್ರಸ್ಟ್‌ಗೇಟ್ ತೆರೆದು ನೀರು ಬಿಡಲಾಗಿದೆ. ಜಲಾಶಯಕ್ಕೆ ಬಾಗಿನ ನೀಡಿದರೆ ಅಕಾರ ಕಳೆದುಕೊಳ್ಳುತ್ತಾರೆ ಎನ್ನುವ ಊಹಾಪೋಹ ಇದೆ. ಕೆಲ ದಿನಗಳ ಹಿಂದೆ ಅಕಾರಿಗಳು ಬಾಗಿನ ಸಲ್ಲಿಸಿರುವುದರಿಂದ ನಾವು ಮತ್ತೆ ಬಾಗಿನ ನೀಡಿಲ್ಲ. ಕ್ರಸ್ಟ್‌ಗೇಟ್ ತೆರೆದು ನದಿಗೆ ನೀರು ಬಿಟ್ಟಿದ್ದೇವೆ.

ಗೋಪಾಲಕೃಷ್ಣ ಬೇಳೂರು, ಶಾಸಕ