- ಚಿತ್ರದುರ್ಗ:ಮಹಾತ್ಮಗಾಂಧೀಜಿ ಅವರ 155ನೇ ಜನ್ಮ ದಿನದ ಅಂಗವಾಗಿ ಪ್ರೌಢಶಾಲೆ,ಪದವಿಪೂರ್ವ,ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗ ಳಿಗೆ ವಾರ್ತಾ ಇಲಾಖೆಯಿಂದ ಏರ್ಪಡಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಬೇಕೆಂದು ಜಿ ಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂದಲ್ಲಿ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳ ಬೇ ಕು. ಪ್ರತಿ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು. ಸ್ಪರ್ಧೆಗೆ ಶಾಲೆ, ಕಾಲೇಜು ಹಂತದಲ್ಲಿಯೇ ಸ್ಪರ್ಧೆ ಏರ್ಪಡಿಸಿ ಪೂರ್ವ ಸಿದ್ಧತೆಗೆ ಸೂಚಿಸಬೇಕು.
ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 3 ಪ್ರಬಂಧದ ಫಲಿತಾಂಶವನ್ನು ಡಿಡಿಪಿಐ,ಡಿ ಡಿಪಿಯು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಚಿತ್ರದುರ್ಗ ಸರ್ಕಾರಿ ಕಲಾ ಪ್ರಾಂಶುಪಾಲರು ಸೆಪ್ಟೆಂಬರ್ 6 ರೊ ಳಗೆ ಜಿಲ್ಲಾ ವಾರ್ತಾಧಿಕಾರಿಗೆ ತಲುಪಿಸಬೇಕೆಂದರು.
ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ,ಡಿಡಿಪಿಐ ಎಂ.ಆರ್.ಮಂಜುನಾಥ್,ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್, ಶಿಕ್ಷಣ ಇಲಾಖೆ ಡಿವೈಪಿಸಿ ಸಿ.ಎಸ್.ವೆಂಕಟೇಶ್, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಸಿದ್ರಾಮ ಚನಗೊಂಡ, ದಾವಣಗೆರೆ ವಿವಿ ಜಿಆರ್‌ಹಳ್ಳಿ ಸ್ನಾತಕೋತ್ತರ ಕೇಂದ್ರದ ಡಾ.ಸುಂದರಂ,ಸರ್ಕಾರಿ ಕಲಾ ಕಾಲೇಜಿನ ಡಾ.ವಿ.ಪ್ರಸಾದ್,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್‌ಹೆಬ್ಬಳ್ಳಿ,ವಾರ್ತಾಧಿಕಾರಿ ತುಕಾರಾಂರಾವ್ ಮತ್ತಿತರರು ಇದ್ದರು.