filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.46203703, 0.175625);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38; 
ಜಿಲ್ಲೆ

ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಿ

ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿ ಸಮಾಜದ ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ಹೋಗಲಾಡಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಹುಡೇದಾ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ಕಾರ್ಮಿಕ ಇಲಾಖೆ, ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ನಗರ ಪ್ರದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಜಾಗೃತಿ ಮೂಡಿಸುವುದು ಅತ್ಯಂತ ಸಹಕಾರಿಯಾಗಿದೆ. ಈ ಮೂಲಕ ಸಮಾಜದ ಅನಿಷ್ಟ ಪದ್ಧತಿಗಳಲ್ಲಿ ಒಂದಾಗಿರುವ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಶ್ರಮಿಸಬೇಕಿದೆ. ಇದಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ ಮಾತನಾಡಿ, ಮಕ್ಕಳು ದೇಶದ ಸಂಪತ್ತಾಗಿದ್ದು, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಬೆಳೆಯಬೇಕು. ಪ್ರಬುದ್ಧರಾಗದ ಮಕ್ಕಳ ದೈಹಿಕ ದುಡಿಮೆಯಿಂದ ಅವರ ಜೀವನದ ಮೇಲೂ ತೀವ್ರತರ ಪರಿಣಾಮ ಬೀರಲಿದೆ. 18 ವಯಸ್ಸಿನವರೆಗೆ ಮಕ್ಕಳನ್ನು ಯಾವುದೇ ದುಡಿಮೆಗೆ ಕಳುಹಿಸದೇ ಶಿಕ್ಷಣವನ್ನು ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕ ಮಹೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಚೆಲುವರಾಜು, ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ಸಿದ್ದರಾಜು, ಕಟ್ಟಡ ಕಾರ್ಮಿಕ ಮಂಡಳಿಯ ರಾಜೇಶ್, ಇಲಾಖೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳು ಹಾಜರಿದ್ದರು.