ವಿಜಯವಾಣಿ ಸುದ್ದಿಜಾಲ ಕಾರವಾರ
ನಗರದ ನಂದನಗದ್ದಾದ ಸುಮಾರು 4 ವರ್ಷ ಬಾಲಕನೊಬ್ಬ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಪುಟ್ಟ ಕಂದಮ್ಮನ ಸ್ಥಿತಿ ಕಣ್ಣಲ್ಲಿ ನೀರು ಬರುವಂತಿದೆ.
ಪ್ರೇಮಾನಂದ ಕಾಂಬ್ಳೆ ಹಾಗೂ ಪ್ರಜ್ಞಾ ಕಾಂಬ್ಳೆ ದಂಪತಿಯು ನಂದನಗದ್ದಾದ ನಾಗನಾಥ ದೇವಸ್ಥಾನದ ಹತ್ತಿರದ ಪುಟ್ಟ ಗುಡಿಸಿಲಿನಂಥ ಮನೆಯೊಂದರಲ್ಲಿ ವಾಸಿಸುತ್ತಿದ್ದು, ಅವರ 4 ವರ್ಷದ ಪುತ್ರನಿಗೆ ೭ ತಿಂಗಳುಗಳ ಹಿಂದೆ ಕಿವಿಯ ಹಿಂಬದಿಯಲ್ಲಿ ಆದ ಒಂದು ಚಿಕ್ಕ ಗುಳ್ಳೆ ಬರಬರುತ್ತಾ ದೊಡ್ಡದಾಗಿ ಇದೀಗ ಇಡೀ ಮುಖವನ್ನೇ ಆವರಿಸಿಕೊಂಡಿದ್ದು, ಕುಟುಂಬವನ್ನ ದುಃಖದಲ್ಲಿ ಮುಳುಗಿಸಿದೆ.
ಗುಳ್ಳೆ ಕೊಂಚ ದೊಡ್ಡದಾಗುತ್ತಿದ್ದಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವನ್ನ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಕಡಿಮೆಯಾಗದಾಗ ಮಂಗಳೂರಿನ ಖಾಗಿ ಆಸ್ಪತ್ರೆಗೆ ದಾಖಲಿಸಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗಿತ್ತು ಆದರೂ ಗುಣಮುಖವಾದಾಗ ಕುಟುಂಬದವರು ನಾಟಿ ಔಷಧ ಮಾಡುತ್ತಿದ್ದಾರೆ. ಆದರೆ, ಈಗಾಗಲೇ ಗುಳ್ಳೆ ಅಧ ಮುಖವನ್ನು ಆವರಿಸಿ, ಕಿವಿ, ಒಂದು ಕಣ್ಣನ್ನು ಮುಚ್ಚಿದೆ. ಹೆಚ್ಚಿನ ಚಿಕಿತ್ಸೆ ಕೊಡಿಸಲು ಅವರಿಗೆ ಹಣದ ಕೊರತೆ ಇದೆ.
ಈ ಬಗ್ಗೆ ಮಾಹಿತಿ ಪಡೆದ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯ್ಕ, ಅವರು ಮಗುವನ್ನು ಕ್ರಿಮ್ಸ್‌ಗೆ ಸೇರಿಸಿದ್ದಾರೆ. ಕ್ರಿಮ್ಸ್ ನಿರ್ದೇಶಕ ಡಾ.ಗಜಾನನ ನಾಯಕ ಅವರು ಮಗುವಿನ ಪರಿಸ್ಥಿತಿ ನೋಡಿ, ಮರುಗಿ, ಉಚಿತ ಆಂಬುಲೆನ್ಸ್ ಮಾಡಿಸಿ ಹುಬ್ಬಳ್ಳಿ ಕಿಮ್ಸ್‌ಗೆ ಕಳಿಸಿಕೊಟ್ಟಿದ್ದಾರೆ.