ಬಾಗಲಕೋಟೆ: ನವನಗರದಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದ ಮಕ್ಕಳಿಗಾಗಿ ಸ್ಥಾಪಿಸಲಾದ ಕಂಪ್ಯೂಟರ ಲ್ಯಾಬ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ಎನ್.ವಿ.ವಿಜಯ ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲನ್ಯಾಯ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಂಪ್ಯೂಟರ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಬಾಲ ಮಂದಿರದ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪೊಲೀಸ್ ಇಲಾಖೆ ಮತ್ತು ಬಾಲ ಮಂದಿರಗಳ ಸಮನ್ವತೆಯಿಂದ ಕಾರ್ಯನಿರ್ವಹಿಸುತ್ತಿರುವದನ್ನು ಗಮನಿಸಿ ಮಕ್ಕಳಿಗೆ ತಮ್ಮ ಶೈಕ್ಷಣಿಕ ಹಂತದಲ್ಲಿ ಇದರ ಸದುಪಯೋಗ ಪಡಿಸಿಕೊಂಡು ಸಾಧಕರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ತಿಳಿಸಿದರು.
ಪ್ರಾರಂಭದಲ್ಲಿ ೨ನೇ ಹೆಚ್ಚುವರಿ ದಿವಾನಿ ನ್ಯಾಯಾಽÃಶ ರಾಜಶೇಖರ ತಿಲಗಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತಿ ಹೊಂದಿದ ಡಿವೈಎಸ್‌ಪಿ ಪಂಪನಗೌಡ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಡಾ.ವೀಣಾ ಎಂ, ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಸುಜಾತಾ ಕೋರಿ, ಬಾಲ ನ್ಯಾಯ ಮಂಡಳಿಯ ಅಽÃಕ್ಷಕ ಎಸ್.ಎಸ್.ಅಡಳ್ಳಿ, ಶಿಲ್ಪಾ ಕುಲಕರ್ಣಿ ನಿರೂಪಿಸಿದರು. ಬಾಲಕರ ಬಾಲ ಮಂದಿರದ ಅಽÃಕ್ಷಕಿ ಜಯಮಾಲಾ ದೊಡಮನಿ ವಂದಿಸಿದರು.