ಜಿಲ್ಲೆ

ಬಾಲಕರ ಬಾಲ ಮಂದಿರದಲ್ಲಿ ಮಕ್ಕಳ ದಿನಾಚರಣೆ

ಬಾಗಲಕೋಟೆ: ನವನಗರದ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ಕೇಕ್ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಮಕ್ಕಳಿಗೆ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಬೇಕು ಎಂದರು.

೨ನೇ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶ ರಾಜಶೇಖರ ತಿಳಗಂಜಿ ಮಾತನಾಡಿ, ಮಕ್ಕಳಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವಂತೆ ಮಾಡಿ ಸತ್ಪ್ರಜೆಗಳಾಗುವಂತೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಾಲಮಂದಿರದ ಮಕ್ಕಳಿಗಾಗಿ ಶ್ರಮಿಸಿದ ಬಾಲಕರ ಬಾಲ ಮಂದಿರದ ಅಧೀಕ್ಷಕಿ ಜಯಮಾಲಾ ದೊಡಮನಿ, ಮಕ್ಕಳ ಕಲ್ಯಾಣಾಽಕಾರಿ ಕೇಶವದಾಸ್, ಮಕ್ಕಳ ಪುನರ್ವಸತಿ ಕೇಂದ್ರದ ರೇಣುಕಾ ಹಲಕುರ್ಕಿ, ಆಪ್ತ ಸಮಾಲೋಚಕರಾದ ವಿಜಯಕುಮಾರ, ಯಲ್ಲೇಶ್ವರಿ ಬಂಡಿ ಅವರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ ೨೦೨೪ರ ದತ್ತು ಮಾಸಾಚರಣೆಯ ಅಂಗವಾಗಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಾಲ ನ್ಯಾಯಮಂಡಳಿಯ ಸದಸ್ಯೆ ಸುಜಾತಾ ಕೋರಿ, ಅಧೀಕ್ಷಕಿ ಎಸ್.ಎಸ್.ಅಡಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಿಲ್ಪಾ ಹಿರೇಮಠ ನಿರೂಪಿಸಿ ವಂದಿಸಿದರು.