ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆಯನ್ನು ಮದುವೇಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ p ತೀರ್ಪು ಪ್ರಕಟಿಸಿದೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಗ್ರಾಮದ ನಿವಾಸಿ ಹಾಲಿ ಕೌಜಲಗಿಯಲ್ಲಿ ವಾಸಿಸುವ ಕರಿಯಪ್ಪ ವಿಠಪ್ಪ ಅವೊಜಿ ( 30)ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತೆಯ ಜತೆ 2024ರಲ್ಲಿ ಅಪರಾಧಿಯು ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯವೆಸಗಿ,ನಂತರ ಪುಸಲಾಯಿಸಿ ಮದುವೇಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿರುವ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.