ಜಿಲ್ಲೆ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಪ್ರಕಟ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:

ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಪ್ರಕಟ

ಚಿಕ್ಕೋಡಿ: ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.

ಚಿಕ್ಕೋಡಿ ತಾಲೂಕಿನ ಖೇಮಲಾಪುರ ಗ್ರಾಮದ ನಿವಾಸಿ ಯಲ್ಲಪ್ಪ ಸೋನವ್ವಾ(ತಾಯಿ) ಕಾಂಬಳೆ( 30) ಶಿಕ್ಷೆಗೆ ಒಳಗಾದ ಅಪರಾಧಿ.

ಅಪ್ರಾಪ್ತ ಬಾಲಕಿಯನ್ನು ಅಪರಾಧಿ ಮದುವೆ ಆಗುವುದಾಗಿ ಪುಸಲಾಯಿಸಿ ಅಪಹರಿಸಿ ಅತ್ಚಾಚಾರ ಎಸಗಿರುವ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡು ರಾಯಬಾಗ ಪೊಲೀಸ್ ಠಾಣೆ ತನಿಖಾಧಿಕಾರಿ ಹೆಚ್.ಡಿ.ಮುಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.