ಜಿಲ್ಲೆ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಪ್ರಕಟ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:

ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಪ್ರಕಟ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.

ನಿಪ್ಪಾಣಿ ಪಟ್ಟಣದ ಬುದ್ಧ ನಗರದ ನಿವಾಸಿ ಆಕಾಶ@ಅಕ್ಷಯ ಮಹಾದೇವ ಸಾಳುಂಕೆ(32) ಶಿಕ್ಷೆಗೊಳಗಾದ ಅಪರಾಧಿ.

ಅಪ್ರಾಪ್ತೆಯನ್ನು ಅಪರಾಧಿ ಬಲವಂತವಾಗಿ ಅತ್ಯಾಚಾರ ಎಸಗಿರುವ ಕುರಿತು ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡ ನಿಪ್ಪಾಣಿ ಶಹರ ಪೊಲೀಸ್ ಠಾಣೆ ತನಿಖಾಧಿಕಾರಿ ಎಸ್.ಡಿ.ಸತ್ಯನಾಯಿಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.