ತುಮಕೂರು: ಸಾಲ ವಸೂಲಾತಿಗೆ ಮನೆ ಬಾಗಿಲಿಗೆ ಬಂದಿದ್ದ ಮೈಕ್ರೋ ೈನಾನ್ಸ್ ಸಿಬ್ಬಂದಿ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿಬಂದಿದೆ. ಚಿ.ನಾಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಗ್ರಾಮ ಒಂದಕ್ಕೆ ಏ. 24ರಂದು ಸಾಲ ವಸೂಲಿಗೆ ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರಣ್(24) ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಬಾಲಕಿಯ ಮೈಮೇಲೆ ಪರಚಿದ ಗಾಯಗಳಾಗಿವೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಹಂದನಕೆರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.