ಬೇಲೂರು: ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಒಟ್ಟು 210 ಕೋಟಿ ರೂ. ಗಳಲ್ಲಿ ವಸತಿ ನಿಲಯ ಕಟ್ಟಡ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.
ಪಟ್ಟಣ ಸಮೀಪದ ಹೇಮಾವತಿ ಮಂಜುನಾಥ್ ಬಡಾವಣೆಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹಿಂದುಳಿದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2 ಕೋಟಿ ರೂ. ಅನುದಾನದಲ್ಲಿ ವಸತಿ ನಿಲಯ ಕಟ್ಟಡ ಕಾಮಗಾರಿ ಮಾಡಿಸಲಾಗುತ್ತಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಉತ್ತಮ ವಿದ್ಯಾಭ್ಯಾಸ ಮಡುವ ಮೂಲಕ ಉತ್ತಮ ಪ್ರಜೆಯಾಗಬೇಕು.
ಜೆಡಿಎಸ್ ಮುಖಂಡರಾದ ಸಂತೋಷ್, ಸಿ.ಎಚ್.ಮಹೇಶ್, ಸೌಮ್ಯಾ, ಮಹೇಶ್, ಗುತ್ತಿಗೆದಾರ ದೀಪು ಇತರರು ಇದ್ದರು.