ಹೊನ್ನೂರಿನಲ್ಲಿ ಆಯೋಜಿಸಿದ್ದ ಬಾಲ್‌ಬ್ಯಾಡ್ಮಿಂಟನ್ ಪಂದ್ಯದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಹದೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ.  
ಜಿಲ್ಲೆ

ಬಾಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹನೂರು: ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ರಾಜ್ಯ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇತ್ತೀಚಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಮಹದೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಜಯಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲೂ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.