ಜಿಲ್ಲೆ

ಬಾಲ್ಕನಿಯಿಂದ ಬಿದ್ದು ಬಿಬಿಎ ವಿದ್ಯಾರ್ಥಿನಿ ಸಾವು

ಮಂಜುನಾಥ ತಿಮ್ಮಯ್ಯ

ಮೈಸೂರು: ಸಯ್ಯಜಿ ರಾವ್ ರಸ್ತೆಯಲ್ಲಿನ ಅಪಾರ್ಟ್‌ಮೆಂಟ್ ಬಾಲ್ಕನಿಯಿಂದ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾರೆ.

ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವ ಅನಿಕಾ ಇಲಾಯಿ(20) ಮೃತರು.

ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಅನಿಕಾ, ಭಾನುವಾರ ರಾತ್ರಿ ವೇಳೆ ಫ್ಲಾಟ್‌ನ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದರು.

ಈ ಸಂದರ್ಭದಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.