oplus_131074 
ಜಿಲ್ಲೆ

ಬಾಲ್ಯ ವಿವಾಹ ಸಾಮಾಜಿಕ ಪಿಡುಗು

ಚಿತ್ರದುರ್ಗ:ಹದಿನೆಂಟು ವರ್ಷ ವಯಸ್ಸಿನೊಳಗಿರುವ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಅಪಾಯ ತಂದುಕೊಳ್ಳದಂತೆ ಚಿತ್ರದು ರ್ಗ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಪಾಲಕರನ್ನು ಎಚ್ಚರಿಸಿದರು. ನೆಹರು ನಗರದ ಆರೋಗ್ಯ ಕೇಂದ್ರ ದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಮಾತನಾಡಿದ ಅವರು,ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗು ನಿಯಂತ್ರಣವಾಗದಿದ್ದರೆ ತಾಯಿ-ಶಿಶು ಮರಣ ಪ್ರಮಾಣ ಹೆಚ್ಚಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ,ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ವನಜಾಕ್ಷಿ ಮಾತನಾಡಿದರು. ಫಾರ್ಮಾಸಿ ಅಧಿಕಾರಿ ಆಸಿಯಾ,ಪ್ರಯೋಗಶಾಲಾ ತಂತ್ರಜ್ಞೆ ಪೂರ್ಣಿಮಾ,ಶುಶ್ರೂಷಾಣಾಧಿಕಾರಿ ಮನು,ಆಶಾ ಕಾರ್ಯಕರ್ತೆಯರಾದ ಭಾಗ್ಯಮ್ಮ, ಕೆಂಚಮ್ಮ ಲಿಖಿತಾ ಮತ್ತಿತರರು ಇದ್ದರು.