ಜಿಲ್ಲೆ

ಬಾಲ್ಯವಿವಾಹ,ಎಫ್‌ಐಆರ್ ದಾಖಲಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಚಿತ್ರದುರ್ಗ: ಬಾಲ್ಯವಿವಾಹ ಪ್ರಕರಣಗಳ ವಿರುದ್ಧ ಎಫ್‌ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿ ಕಾರಿ ಟಿ.ವೆಂಕಟೇಶ್ ಅಧಿಕಾರಿಗಳನ್ನು ಎಚ್ಚರಿಸಿದರು. ಡಿಸಿ ಕಚೇರಿಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿ,ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚುತ್ತಿವೆ.

ಇಲಾಖೆ ಅಂಕಿ,ಅಂಶಗಳ ಪ್ರಕಾರವೇ ಕಳೆದ ಜುಲೈಯಿಂದ ಸೆಪ್ಟೆಂಬರ್ ಅಂತ್ಯಕ್ಕೆ 18ಪ್ರಕರಣಗಳು ದಾಖಲಾಗಿವೆ. ಆದರೆ ಆರೋಗ್ಯ ಇಲಾಖೆ ಆರ್‌ಸಿಎಚ್ ತಂತ್ರಾಂಶದಲ್ಲಿ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದವರೆಗೆ 194 ಬಾಲಗರ್ಭಿಣಿ ಪ್ರಕರಣ ಬೆಳಕಿಗೆ ಬಂದಿ ದ್ದು, ನಿಗಾ ವಹಿಸಿ ಇಂಥ ಪ್ರಕರಣಗಳನ್ನು ನಿಯಂತ್ರಿಸಬೇಕು.

ತಾಲೂಕು ಹಾಗೂ ಗ್ರಾಮ ಮಟ್ಟದ ಮಹಿಳಾ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿಗಳು ಸಕ್ರಿಯವಾಗಿ ಕಾರ‌್ಯ ನಿರ್ವಹಿಸಬೇಕು. ಪ್ರತಿ ತಿಂಗಳು ಶಾಲೆಗಳಲ್ಲಿ 7ಕ್ಕಿಂತ ಹೆಚ್ಚು ದಿನ ಗೈರಾದ ಮಕ್ಕಳ ವಿವರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಶಿಕ್ಷಣ ಇಲಾಖೆ ನೀ ಡ ಬೇಕೆಂದರು.

ಜಿಲ್ಲೆಯಲ್ಲಿ ಕಳೆದ ಜುಲೈನಿಂದ ಸೆಪ್ಟೆಂಬರ್‌ವರೆಗೆ 35 ಬಾಲ್ಯವಿವಾಹಗಳ ವಿರುದ್ಧ ದೂರು ದಾಖಲಾಗಿದ್ದು,17ನ್ನು ತಡೆಯಲಾಗಿದೆ. 18 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿ ಆರ್.ಬಣಕಾರ್ ಹೇಳಿದರು.

ಜಿಲ್ಲೆಯಲ್ಲಿ 2023-24ರಲ್ಲಿ ದಾಖಲಾಗಿದ್ದ 193 ಬಾಲ್ಯವಿವಾಹ ಪ್ರಕರಣಗಳ ಪೈಕಿ 102ನ್ನು ತಡೆಯಲಾಗಿದೆ. 91 ಪ್ರಕರಣಗಳಲ್ಲಿ ಎಫ್‌ಐಆರ್‌ದಾಖಲಿಸಲಾಗಿದೆ. ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್ ಅಂತ್ಯದವರೆಗೆ 102 ದೂರುಗಳು ದಾಖಲಾಗಿದ್ದು,53 ಪ್ರಕರಣಗಳಲ್ಲಿ ತಡೆಯಲಾಗಿದೆ. 49 ಪ್ರಕರಣಗಳಲ್ಲಿ ದೂರು ಹಾಗೂ ಇದೇ ಅವಧಿ 76 ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ಮಕ್ಕಳ ಸಹಾಯವಾಣಿ ಕೇಂದ್ರ 1098ಕ್ಕೆ 228 ಕರೆಗಳು ಬಂದಿದ್ದು,ಮಕ್ಕಳಿಗೆ ಅಗತ್ಯ ನೆರವು ನೀಡಲಾಗಿದೆ. ಜಿಲ್ಲೆಗೆ ಸರ್ಕಾರಿ ವಿಶೇಷ ದತ್ತು ಕೇಂದ್ರ ಮಂಜೂರು ಆಗಿದೆ ಎಂದು ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ಸವಿತಾ ತಿಳಿಸಿದರು. ಅಂಗನವಾಡಿಗಳಲ್ಲಿ ವಿತರಿಸುವ ಆಹಾರ ಸಾಮಗ್ರಿ ಗುಣಮಟ್ಟ ಪರಿಶೀಲನೆಗೆ ಎಸಿ ಅಧ್ಯಕ್ಷತೆಯ ಸಮಿತಿ ವರದಿ ನೀಡಬೇಕು. ಅಂಗನವಾಡಿ ಕಟ್ಟಡಕ್ಕೆ ನಿವೇಶನ ಗುರುತಿಸ ಬೇಕೆಂದ ರು.

ಶಾಲೆ ಬಿಟ್ಟ ಹಾಗೂ ಏಳು ದಿನಗಳಿಗಿಂತ ಹೆಚ್ಚು ಗೈರಾದ 2,284 ಮಕ್ಕಳನ್ನು ಗುರುತಿಸಲಾಗಿದೆ ಎಂದು ಡಿಡಿಪಿಐ ಎಂ.ಆರ್.ಮಂಜು ನಾಥ್ ಹೇಳಿದರು. ಜಿಲ್ಲೆಯಲ್ಲಿ 144 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಲಭ್ಯವಿದ್ದು,150 ಅಂಗನವಾಡಿ ಕೇಂದ್ರಗಳಿಗೆ ನಿವೇಶನದ ಅ ಗತ್ಯವಿದೆ ಎಂದು ಬಣಕಾರ್ ಹೇಳಿದರು. ಎಸ್‌ಪಿ ರಂಜಿತ್‌ಕುಮಾರ್ ಬಂಡಾರು,ಎಸಿ ಎಂ.ಕಾರ್ತಿಕ್,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರ ಸಾದ್,ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್,ಆರ್‌ಟಿಒ ಭರತ್ ಎಂ.ಕಾಳಿಸಿಂಗೆ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಮತ್ತಿತರ ರು ಇದ್ದರು.