ಜಿಲ್ಲೆ

ಬಾಲ್ಯವಿವಾಹದಲ್ಲಿ ಭಾಗಿಯಾಗುವವರ ವಿರುದ್ಧ ತಕ್ಷಣವೇ ಎ್ಐಆರ್ ದಾಖಲಿಸಿ

ಚಿಕ್ಕಬಳ್ಳಾಪುರ : ಬಾಲ್ಯ ವಿವಾಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ತಕ್ಷಣವೇ ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬಾಲ್ಯ ವಿವಾಹ, ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ದೌರ್ಜನ್ಯ ತಡೆಗಟ್ಟುವ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾಮಟ್ಟದ ಟಾಸ್ಕ್ ೆರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಬಾಲ್ಯ ವಿವಾಹಗಳೀಗೆ ಇಂದಿಗೂ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಬಿದ್ದಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಗ್ರಾಮದಲ್ಲಿ ಮಕ್ಕಳ ವಿವಾಹ ನಡೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಗ್ರಾಪಂ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಹಾಗೂ ಪ್ರಕರಣದಲ್ಲಿ ಭಾಗಿಯಾಗುವವರ ವಿರುದ್ಧ ಎ್ಐಆರ್ ದಾಖಲಿಸುವಂತೆ ತಾಕೀತು ಮಾಡಿದರು.

ಬಾಲ್ಯ ವಿವಾಹಗಳಿಗೆ ಕಡಿವಾಣಕ್ಕೆ ಪಿಡಿಒ, ಗ್ರಾಪಂ ಕಾರ್ಯದರ್ಶಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು, ಈ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ಅರಿವು ಮೂಡಿಸಬೇಕೆಂದರು.ಬಾಲ್ಯ ವಿವಾಹವನ್ನು ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಆಯಾ ಗ್ರಾಮಗಳಲ್ಲಿ ಅರ್ಲಟ್ ಆಗಿದ್ದು ನಿಯಮ ಉಲ್ಲಂಘಿಸುತ್ತಿರುವವರ ಬಗ್ಗೆ ದೂರು ನೀಡಿದರೆ ಇಲಾಖೆ ತಕ್ಷಣೆವೇ ಸ್ಪಂದಿಸುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

ಅಪೌಷ್ಟಿಕತೆ ಹೋಗಲಾಡಿಸಿ : ಎನ್‌ಆರ್‌ಸಿ ಕೇಂದ್ರಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ದಾಖಲಾತಿ ಹೆಚ್ಚಾಗಬೇಕು. ಸಮಸ್ಯಾತ್ಮಕ ಮಗುವಿಗೆ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ನೀಡುವ ಮೂಲಕ ಚೇತರಿಸಿಕೊಳ್ಳುವವರೆಗೂ ಮುತುವರ್ಜಿ ವಹಿಸುವುದರಿಂದ ಮಗುವಿನ ಸಾವಿನ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಡಿಸಿ ಲತಾ ಹೇಳಿದರು.

98 ದೂರುಗಳು ಸ್ವೀಕಾರ : 2020-21ನೇ ಸಾಲಿನಲ್ಲಿ ಬಾಲ್ಯ ವಿವಾಹ ಸಂಬಂಧ 98 ದೂರುಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 92 ಬಾಲ್ಯ ವಿವಾಹಗಳನ್ನು ನಿಲ್ಲಿಸಲಾಗಿದೆ. 6 ಬಾಲ್ಯ ವಿವಾಹಗಳು ನಡೆದಿದ್ದು, ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಸಭೆಗೆ ಮಾಹಿತಿ ನೀಡಿದರು.